Index   ವಚನ - 1309    Search  
 
ನೆನೆದೆಹೆನೆಂದಡೆ ಮನಕ್ಕೆ ಸಿಲುಕದು, ಅರಿದೆಹೆನೆಂದಡೆ ಕುರುಹಿಂಗೆ ಬಾರದು, ಕಂಡೆಹೆನೆಂದಡೆ ಮೂರ್ತಿಯಲ್ಲ. ತನುವಿನೊಳಗಿಲ್ಲದ ಮನದೊಳಗಿಲ್ಲದ ಘನವು, ನಿಮ್ಮ ಮನಕ್ಕೆ ವೇದ್ಯವಾದ ಪರಿ, ಎಂತಯ್ಯಾ? ಗುಹೇಶ್ವರನೆಂಬ ಲಿಂಗವು ಜಗದ ಕಣ್ಣಿಂಗೆ ಕತ್ತಲೆಯ ಕವಿಸಿ ತನ್ನ ತಪ್ಪಿಸಿಕೊಂಡಿಪ್ಪ [ಆ] ಭೇದ ನಿನ್ನೊಳಗಡಗಿದ ಪರಿ ಎಂತು ಹೇಳಾ ಸಂಗನಬಸವಣ್ಣಾ?