ವಚನ - 1332     
 
ಪರುಷದ ಪುತ್ಥಳಿಗೆ ಲೋಹದ ಶೃಂಗಾರವೇತಕೊ? ``ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ| ಲಿಂಗಬಾಹ್ಯಾತ್ ಪರಂ ನಾಸ್ತಿ'' ಎಂಬ ಭ್ರಾಂತೇಕೋ? ಲಿಂಗಮಧ್ಯೆ ಜಗತ್ಸರ್ವವಾದರೆ, ಈ ಆತ್ಮಂಗೆ ಹಿಂದಣುತ್ಪತ್ಯ ಸ್ಥಿತಿಲಯಂಗಳೆಂತಾದವು? ಲಿಂಗ ಲಿಂಗದಂತೆ ಜಗ ಜಗದಂತೆ ಲಿಂಗವನೊಳಗು ಮಾಡಿ, ಜಗವ ಹೊರಗು ಮಾಡಬಲ್ಲನೆಮ್ಮ ಶರಣ, ಗುಹೇಶ್ವರ ನೀನೇ ತಾನು.