ವಚನ - 1337     
 
ಪುಣ್ಯವುಳ್ಳ ಕಾಲಕ್ಕೆ ಮಣ್ಣು ಹೊನ್ನಪ್ಪುದು, ಪುಣ್ಯವುಳ್ಳ ಕಾಲಕ್ಕೆ ಪಾಷಾಣ ಪರುಷವಪ್ಪುದು ನೋಡಾ. ಮುನ್ನ ಮುನ್ನವೆ, ಅಚ್ಚೊತ್ತಿದ ಭಾಗ್ಯ ಎನ್ನ ಕಣ್ಣ ಮುಂದೆ ಕಾಣಬಂದಿತ್ತು ನೋಡಾ! ಮಣ್ಣ ಮರೆಯ ದೇಗುಲದೊಳಗೊಂದು ಮಾಣಿಕ್ಯವ ಕಂಡಬಳಿಕ, ಇನ್ನು ಮುನ್ನಿನಂತಪ್ಪುದೆ ಗುಹೇಶ್ವರಾ?