ವಚನ - 1345     
 
ಪೌರ್ಣಮಿ ಬಪ್ಪನ್ನಕ್ಕ, ಬಾಯಿಬಂಧನದಲ್ಲಿದ್ದ ಚಕೋರನಂತಿದ್ದೆನಯ್ಯಾ. ಉಣಲಾಗದೆಂಬ ಶಾಸ್ತ್ರವಿಡಿದು ಇದ್ದವನಲ್ಲ. ಉಣಲಾಗದೆಂಬ ಶಾಸ್ತ್ರವುಂಟೆ ಲಿಂಗವಂತಂಗೆ? ಅಹೋರಾತ್ರಿ ಅಷ್ಟಭೋಗಂಗಳ ಲಿಂಗಕ್ಕೆ ಕೊಟ್ಟು ಕೊಳಬೇಕು. ಮಾಡುವ ನೀಡುವ ನಿಜಭಕ್ತರಿಲ್ಲದ ಕಾರಣ, ಬಾಯ್ದೆರೆಯದಿದ್ದೆನು. ಮಾಡಿಹೆ ನೀಡಿಹೆನೆಂಬ ಸಂತೋಷದ ಆಪ್ಯಾಯನ ಹಿರಿದಾಯಿತ್ತು. ನೀಡಯ್ಯಾ ಸಂಗನಬಸವಣ್ಣಾ ಗುಹೇಶ್ವರಂಗೆ!