Index   ವಚನ - 1356    Search  
 
ಬ-ಎಂಬಲ್ಲಿ ಎನ್ನ ಭವ ಹರಿಯಿತ್ತು. ಸ-ಎಂಬಲ್ಲಿ ಸರ್ವಜ್ಞನಾದೆನು. ವ-ಎಂಬಲ್ಲಿ ವಚಿಸುವಡೆ ಚೈತನ್ಯಾತ್ಮಕನಾದೆನು. ಇಂತೀ ಬಸವಾಕ್ಷರತ್ರಯವೆನ್ನ ಸರ್ವಾಂಗದಲ್ಲಿ ತೊಳಗಿ ಬೆಳಗುವ ಭೇದವನರಿದು ಆನೂ ನೀನೂ 'ಬಸವಾ' 'ಬಸವಾ' 'ಬಸವಾ' ಎನುತಿರ್ದೆವಯ್ಯಾ ಗುಹೇಶ್ವರಾ.