ವಚನ - 1371     
 
ಬಸವಣ್ಣಾ, ನಿನ್ನ ಹೊಗಳತೆ ಅಂತಿರಲಿ, ಎನ್ನ ಹೊಗಳತೆ ಅಂತಿರಲಿ, ಗುರುವಾಗಬಹುದು ಲಿಂಗವಾಗಬಹುದು ಜಂಗಮವಾಗಬಹುದು, ಇಂತೀ ತ್ರಿವಿಧವೂ ಆಗಬಹುದು. ಚೆನ್ನಬಸವಣ್ಣನಾಗಬಾರದು. ನಿನ್ನ ಆಚಾರಕ್ಕೆ ಪ್ರಾಣವಾಗಿ, ಎನ್ನ ಜ್ಞಾನಕ್ಕೆ ಆಚಾರವಾಗಿ ಈ ಉಭಯ ಸಂಗದ ಸುಖದ ಪ್ರಸನ್ನಕ್ಕೆ ಪರಿಣಾಮಪ್ರಸಾದಿಯಾಗಿ ಬಂದ ಘನಮಹಿಮನು ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣನಾಗಬಾರದು ಕಾಣಾ ಸಂಗನಬಸವಣ್ಣಾ.