ವಚನ - 1379     
 
ಬೀದಿಯಲ್ಲಿ ಬಿದ್ದ ಮಾಣಿಕ್ಯವು, ಹೂಳಿದ್ದ ನಿಧಾನವು, ಆರಿಗೂ ಕಾಣಬಾರದು ನೋಡಾ! ಮರಣ ಉಳ್ಳವರಿಗೆ ಮರುಜವಣಿ ಸಿಕ್ಕುವುದೆ? ಪಾಪಿಯ ಕಣ್ಣಿಂಗೆ ಪರುಷ ಕಲ್ಲಾಗಿಪ್ಪಂತೆ ಅಡಗಿ ಇಪ್ಪರಯ್ಯಾ ಶಿವಶರಣರು. ನಮ್ಮ ಗುಹೇಶ್ವರನ ಶರಣ ಮರುಳಶಂಕರದೇವರ ನಿಲವ ನೋಡಾ ಸಂಗನಬಸವಣ್ಣಾ.