ವಚನ - 1385     
 
ಬೇಡುವೆನೆ ದೇವೇಂದ್ರನ ಪದವಿಯನಿನ್ನು? ಮೂಡುವ ಸೂರ್ಯನ ಪ್ರಭೆಯಂತೆ ಓಡದಿರು. ಓಡದಿರು ಎನ್ನ ಮುಂದೆ ಮಾಣಿಕ್ಯದ ಬೆಳಗಿನಂತೆ. ನೋಡು, ಮಾತಾಡು. ಕೃತಕದ ಪದವಿಯ ಬೇಡುವ, ಲಿಂಗವೆನ್ನಲಿದ್ದುದೆ ಗುಹೇಶ್ವರಾ?