ವಚನ - 1404     
 
ಭಾವಕ್ಕೆ ಪೂಜ್ಯನಲ್ಲ, ಬಹಿರಂಗದೊಳಗಡಗಿತ್ತೆಂದಡೆ ಕ್ರಿಯಾಶಬ್ದನಲ್ಲ. ಅರಿವಿನೊಳಗಡಗಿತ್ತೆಂದಡೆ ಮತಿಗೆ ಹವಣಲ್ಲ. ಭಾವ ನಿರ್ಭಾವ ನಿಶ್ಶೂನ್ಯವನು ಕಾಬ ಪರಿಯಿನ್ನೆಂತು ಹೇಳಾ? ಅದ ಕಂಡು, ತನ್ನೊಳಗಿಂಬಿಟ್ಟುಕೊಂಬ ಪರಿಯೆಂತು ಹೇಳಾ, ನಮ್ಮ ಗುಹೇಶ್ವರಲಿಂಗದಲ್ಲಿ, ಸಂಗನಬಸವಣ್ಣಾ?