ವಚನ - 1405     
 
ಭಾವಗೆಟ್ಟು ಭವನಷ್ಟನು ಒಡಹುಟ್ಟಿದ ಐವರ ಕೈಬಿಟ್ಟನು. ಭಂಡನು ಲಜ್ಜೆಭಂಡನು, ಕಂಡಡೆ ನುಡಿಸದಿರಾ ಮಾಯಾದೇವಿ. ಅರಿವನುಟ್ಟು ನೆರೆ ಮರುಳಾದನು ಹುಟ್ಟ ಮುರಿದನು ಮಡಕೆಯನೊಡೆದನು ಆದಿ ಪುರಾತನು ಅಚಲ ಲಿಂಗೈಕ್ಯನು. ಗುಹೇಶ್ವರನಲ್ಲಯ್ಯಂಗೆ ಮೂಗಿಲ್ಲ ಮಗಳೆ.