ವಚನ - 1439     
 
ಮಾಡಿ ಮಾಟವ ಮರೆದು, ಕೂಡಿ ಕೂಟವ ಮರೆದು, ಬಯಲ ಸಮರಸದೊಳಗೆ ಬಯಲ ಬಯಲಾಗಿಪ್ಪವರಾರು ಹೇಳಾ ಬಸವಣ್ಣನಲ್ಲದೆ? ತನ್ನ [ಅ]ಭಿನ್ನವ ಮಾಡಿ ಅನ್ಯವೇನೂ ಇಲ್ಲದೆ ತನ್ನ ತಾ ಮರೆದಿಪ್ಪವರಾರು ಹೇಳಾ ಬಸವಣ್ಣನಲ್ಲದೆ? ಗುಹೇಶ್ವರಾ ನಿಮ್ಮ ಶರಣ ಸಂಗಬಸವಣ್ಣನ ನಿಲವಿಂಗೆ ನಮೋ ನಮೋ ಎಂಬೆನು.