ವಚನ - 1445     
 
ಮಿಂದು ದೇವರ ಪೂಜಿಸಿಹೆನೆಂಬ ಸಂದೇಹಿ ಮಾನವಾ ನೀ ಕೇಳಾ, ಮೀಯದೆ ಮೀನು? ಮೀಯದೆ ಮೊಸಳೆ? ತಾ ಮಿಂದು, ತನ್ನ ಮನ ಮೀಯದನ್ನಕ್ಕರ ಈ ಬೆಡಗಿನ ಮಾತ ಮೆಚ್ಚುವನೆ ನಮ್ಮ ಗುಹೇಶ್ವರ?