Index   ವಚನ - 1452    Search  
 
ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ, ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ, ಅನ್ನ ಉದಕ ಹೊನ್ನು ವಸ್ತ್ರವುಳ್ಳ ದೊರೆಯ ಬಾಗಿಲಲ್ಲಿ ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು. ಗುಹೇಶ್ವರಾ, ನಿಮ್ಮ ಶರಣರು ಆಶಾಪಾಶವಿರಹಿತರು.