ವಚನ - 1456     
 
ಮೃಡನೆ ನಿಮ್ಮ ಪುರಾತನರ ಕಾಣುತ್ತ, ತಡೆಯದೆ ಇದಿರೆದ್ದು ಹೊಡೆವಡೆನಾಗಿ ಬಿಡದು ನಾಚಿಕೆ. ಸುಡದೆನ್ನ ನುಡಿಹ, ಸಡಿಲದೆನ್ನ ಅಹಂಕಾರ ನೋಡಯ್ಯಾ. ಬಡಮನದವನ ಜಡಿದು ನಡೆಸಯ್ಯಾ ಗುಹೇಶ್ವರಾ.