Index   ವಚನ - 1467    Search  
 
ರವಿಕಾಂತಿಯ ಪ್ರಭೆ ಪಾಷಾಣವ ಕೂಡಿ ರತ್ನವೆನಿಸಿಕೊಂಬಂತೆ, ಅರಿವ ಜ್ಞಾನ ಮಾಡುವ ಸತ್ಕ್ರೀಯಿಂದಲ್ಲದೆ ಆ ಸಾಕಾರದ ಪಟಲವು ಹರಿಯದು. ಈ ರವಿಕಾಂತಿಯ ಪ್ರಭೆಯಿಲ್ಲದಿದ್ದಡೆ ಆ ಪಾಷಾಣಕ್ಕೆ ರತ್ನವೆಂಬ ಕುಲ ಮುನ್ನವೇ ಇಲ್ಲ. ರವಿಕಾಂತಿಯ ಪ್ರಭೆಯಡಗೂದಕ್ಕೆ ಪಾಷಾಣ ಹೇಂಗೆ, ಅರಿವಡಗೂದಕ್ಕೆ ಕುರುಹೆಂಬ ನಾಮ ಹಾಂಗೆ. ಆ ಉಭಯವಡಗಿ ಕುರುಹಿಲ್ಲದಿದ್ದಡೆ ಮತ್ತೆ ನಮ್ಮ ಗುಹೇಶ್ವರನೆಂಬ ಮಾತಿನ ಕುರುಹಿಲ್ಲದಿರಬೇಕು. ಕಾಣಾ ಎಲೆ ಅಂಬಿಗರ ಚೌಡಯ್ಯ.