Index   ವಚನ - 1489    Search  
 
ಲಿಂಗಾರ್ಪಿತ ಲಿಂಗಾರ್ಪಿತ ಎಂಬರು ನಾವು ಇದನರಿಯೆವಯ್ಯಾ. ನಿತ್ಯತೃಪ್ತಲಿಂಗಕ್ಕೆ ಹಸಿವೆಂಬುದುಂಟೆ? ಶಿವಾ ಶಿವಾ ತಮ್ಮ ತಮ್ಮ ಹಸಿವ ಲಿಂಗದ ಮೇಲಿಟ್ಟು ಉಣ್ಣದ ಲಿಂಗಕ್ಕಾಗಿ ಅರ್ಪಿತವ ಮೆರೆವರು. ನಮ್ಮ ಗುಹೇಶ್ವರಲಿಂಗಕ್ಕೆ ಒಡಲೆಂಬುದುಳ್ಳಡೆ ಉದರಾಗ್ನಿಯುಂಟು.