Index   ವಚನ - 1493    Search  
 
ವಚನದ ರಚನೆಯೆಂಬ ಮಾತಿನ ಬಣ್ಣದ ಪರಿಯಲ್ಲ ನೋಡಾ. ಹೊಗಳಿ ಕಂಡವರೆಲ್ಲರು ಮೂರ್ತಿಗೊಳಗಾದರು. ವೇದ ಶಾಸ್ತ್ರ ಮಾರ್ಗವೆಲ್ಲವೂ ಹೊಗಳಿ ಕಾಣವೆಂಬುದ, ಗುಹೇಶ್ವರ ಸಾಕ್ಷಿಯಾಗಿ ಮೂರುಲೋಕ ಬಲ್ಲುದು ಕಾಣಾ ಸಿದ್ಧರಾಮಯ್ಯಾ.