Index   ವಚನ - 1494    Search  
 
ವರ್ಣವಿಲ್ಲದ ಲಿಂಗಕ್ಕೆ ರೂಪಪ್ರತಿಷ್ಠೆಯ ಮಾಡುವರು. ಪ್ರಳಯವಿಲ್ಲದ ಲಿಂಗಕ್ಕೆ ಪ್ರಾಣಪ್ರತಿಷ್ಠೆಯ ಮಾಡುವರು. ನುಡಿಯಬಾರದ ಲಿಂಗಕ್ಕೆ ಜಪಸ್ತೋತ್ರ ಪೂಜೆಯ ಮಾಡುವರು. ಮುಟ್ಟಬಾರದ ಲಿಂಗಕ್ಕೆ ಕೊಟ್ಟು ಕೊಂಡಾಡಿಹೆವೆಂಬರು. ಬೊಟ್ಟಿಡಲು ಎಡೆಯಿಲ್ಲದ ಲಿಂಗವ ಮುಟ್ಟಿ ಪೂಜಿಸಿಹೆವೆಂಬ ಭ್ರಷ್ಟರ ನೋಡಾ ಗುಹೇಶ್ವರಾ.