ವಚನ - 1495     
 
ವಸುಧೆಯ ಮುಟ್ಟದೆ ರಸವ ಒಸರಲೀಯದೆ ರಸದಲ್ಲಿ ಕಟ್ಟಬಲ್ಲಡೆ ಅದು ಯೋಗ. ಹೊರಗಿದ್ದ ರಸವ ಕಟ್ಟಬಲ್ಲೆವೆಂಬರೆಲ್ಲಾ ಅಂಜನಸಿದ್ಧರಾಗಿ ಹೋದರು. ಸುಷುಮ್ನಸೂಕ್ಷ್ಮನಿಧಿಯ ಮಧ್ಯದ ಕೂಪ ಕಂಬದ ಮೇಲೆ ಪಂಚೇಂದ್ರಿಯವೆಂಬ ಗುಹ್ಯವ ತೊಡೆದು ರಸವ ಕಟ್ಟಬಲ್ಲ ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ನಮೋ ನಮೋ ಎನುತಿರ್ದೆನು.