Index   ವಚನ - 1499    Search  
 
ವಾರವೇಳು, ಜಾತಿ ಹದಿನೆಂಟೆಂದು ನುಡಿವ ಪಾತಕರ ನುಡಿಯ ಕೇಳಲಾಗದು. ಅದೆಂತೆಂದಡೆ: ವಾರವೆರಡು, ಜಾತಿಯೆರಡು, ಭವಿಯೊಂದು ಕುಲ, ಭಕ್ತನೊಂದು ಕುಲ. ಇಂತೀ ಎಂಬತ್ತು ನಾಲ್ಕು ಲಕ್ಷ ಜೀವಕ್ಕೆ ಜೀವನವೆ ಆಹಾರ. ಜೀವ ತಪ್ಪಿಸಿ ಜೀವಿಸಬಾರದು. `ಯಥಾ ಮಂತ್ರ ತಥಾ ಸಿದ್ಧಿ'ಯೆಂದು ಲಿಂಗಕ್ಕರ್ಪಿತವ ಮಾಡಿಕೊಂಬುದೆ ಶುದ್ಧ, ಉಳಿದಾದುದೆಲ್ಲ ಜೀವನ್ಮಯ ಗುಹೇಶ್ವರ.