Index   ವಚನ - 150    Search  
 
ಅದ್ಭುತವೆಂಬ ಪಿಶಾಚಿ ಮೂರುಲೋಕವನವಗ್ರಹಿಸಿತ್ತಯ್ಯಾ! ಆ ಅದ್ಭುತದೊಳಗೊಂದು ಗ್ರಹ, ನಿರಂತರ ನಲಿದಾಡುತ್ತಿದ್ದಿತ್ತಯ್ಯಾ! ವಜ್ರಯೋಗಿ ಖಗರಂಧ್ರಪುರದಲ್ಲಿ, ಗುಹೇಶ್ವರಲಿಂಗವು ತಾನೆ ನೋಡಾ.