Index   ವಚನ - 1507    Search  
 
ವೇದ ಘನವೆಂಬುದೊಂದು ಸಂಪಾದನೆ. ಶಾಸ್ತ್ರ ಘನವೆಂಬುದೊಂದು ಸಂಪಾದನೆ. ಪುರಾಣ ಘನವೆಂಬುದೊಂದು ಸಂಪಾದನೆ. ಆಗಮ ಘನವೆಂಬುದೊಂದು ಸಂಪಾದನೆ. ಅಹುದೆಂಬುದೊಂದು ಸಂಪಾದನೆ. ಅಲ್ಲವೆಂಬುದೊಂದು ಸಂಪಾದನೆ. ಗುಹೇಶ್ವರನೆಂಬ ಮಹಾಘನದ ನಿಜಾನುಭಾವ ಸಂಪಾದನೆಯ ಅರಿಯದ ಕಾರಣ ಹಲವು ಸಂಪಾದನೆಗಳಾದವು.