Index   ವಚನ - 1513    Search  
 
ಶತಕೋಟಿ ಲೋಕಂಗಳೆಲ್ಲ ಬಸವಣ್ಣನ ಕೋಡಿನಲ್ಲಿರ್ದವು ನೋಡಾ. ಅತೀತವಪ್ಪ ಪರಶಿವನು, ಬಸವಣ್ಣನ ಹಿಳಿಲ ಕೆಳಗೆ ಸೂಕ್ಷ್ಮರೂಪಾಗಿರ್ದನು ನೋಡಾ. ಸಕಲ ಶ್ರುತಿ ಸ್ಮೃತಿಗಳೆಲ್ಲ ಬಸವಣ್ಣನ ಹೊಗಳಲರಿಯದೆ ಕೆಟ್ಟವು ನೋಡಾ. ಕರ್ತನಾದನಲ್ಲದೆ ಭೃತ್ಯನಲ್ಲ, ಭಿನ್ನಾಣವ ಹೋಲಲರಿಯೆ ಒಂದೆತ್ತಿಲ್ಲದಿರ್ದಡೆ ಕತ್ತಲೆಯಾಗದೆ ಈ ಜಗವೆಲ್ಲವು? ಹರಿವ ನದಿಗಳೆಲ್ಲ ಅಮೃತವಾದವು ಕಾಣಾ ಬಸವಣ್ಣ ನಿನ್ನಿಂದ! ಹರಿಹನ್ನಿಕೋಟಿ ಯುಗಜುಗಂಗಳು ನಿನ್ನ ಉಸಿರಿನಲ್ಲಿ ಒತ್ತಿದಡೆ ಬ್ರಹ್ಮಾಂಡಕ್ಕೆ ಹೋದವು, ಬಿಟ್ಟಡೆ ಬಿದ್ದವು, ಕಾದಡೆ ಬದುಕಿದವು. ನೀನು ಹೊರೆವ ಯುಗಜುಗಂಗಳು ಒಂದು ತೃಣಮಾತ್ರವಾದ ಕಾರಣ ನಿನ್ನ ಹಸುಮಕ್ಕಳವರೆನುತಿರ್ದೆನಯ್ಯಾ. ನಿನ್ನ ಗೋಮಯದ ಷಡುಸಮ್ಮಾರ್ಜನೆಯ ಮೇಲೆ ಕುಳ್ಳಿರ್ದು ಗುಹೇಶ್ವರಲಿಂಗವು ಶುದ್ಧನಾದನು, ಕಾಣಾ ಸಂಗನಬಸವಣ್ಣಾ ನಿನ್ನಿಂದ!

C-511 

  Thu 08 Feb 2024  

 Nice
  S R.Hemanthraju
Sri ramagundlanahalli