Index   ವಚನ - 1520    Search  
 
ಶಿವ ಗುರುವೆಂದು ಬಲ್ಲಾತನೆ ಗುರು. ಶಿವ ಲಿಂಗವೆಂದು ಬಲ್ಲಾತನೆ ಗುರು. ಶಿವ ಜಂಗಮವೆಂದು ಬಲ್ಲಾತನೆ ಗುರು. ಶಿವ ಪ್ರಸಾದವೆಂದು ಬಲ್ಲಾತನೆ ಗುರು. ಶಿವ ಆಚಾರವೆಂದು ಬಲ್ಲಾತನೆ ಗುರು.- ಇಂತೀ ಪಂಚವಿಧವೆ ಪಂಚಬ್ರಹ್ಮವೆಂದರಿದ ಮಹಾಮಹಿಮ ಸಂಗನಬಸವಣ್ಣನು, ಎನಗೆಯೂ ಗುರು, ನಿನಗೆಯೂ ಗುರು, ಜಗವೆಲ್ಲಕ್ಕೆಯೂ ಗುರು ಕಾಣಾ ಗುಹೇಶ್ವರಾ.