ವಚನ - 1525     
 
ಶ್ರೀಗುರುವೆ ಎನಗೆ ಕಾಯವು, ಶ್ರೀಗುರುವೆ ಎನಗೆ ಪ್ರಾಣವು, ಶ್ರೀಗುರುವೆ ಎನಗೆ ಇಹವು, ಶ್ರೀಗುರುವೆ ಎನಗೆ ಪರವು, ಶ್ರೀಗುರುವೆ ಎನಗೆ ಗತಿಯು, ಶ್ರೀಗುರುವೆ ಎನಗೆ ಮತಿಯು, ಶ್ರೀಗುರುಪಾದವೆ ಎನಗೆ ಘನತರ ಮುಕ್ತಿಗೆ ಕಾರಣವು. ಗುಹೇಶ್ವರ ಗುಹೇಶ್ವರಾ, ನಿಮ್ಮಾಣೆ ಇದು ಸತ್ಯ.