ವಚನ - 1539     
 
ಸಕಳಸ್ಥಲದ ಲಿಂಗ ಮನಸ್ಥಲದಲ್ಲಿ ವೇದ್ಯವಾಗಿ, ಮನಸ್ಥಲದ ಲಿಂಗ ಮಹಾಸ್ಥಲದಲ್ಲಿ ವೇದ್ಯವಾಗಿ, ಆ ಮಹಾಸ್ಥಲವೇ ಎನ್ನ ಸರ್ವಾಂಗದಲ್ಲಿ ವೇದ್ಯವಾದ ಬಳಿಕ ಇನ್ನು ಭಿನ್ನಭಾವಕ್ಕೆ ತೆರಹೆಂಬುದುಂಟೆ? ಗುಹೇಶ್ವರನೆಂಬ ಪ್ರಾಣಲಿಂಗವ ಬೆರಸಿ ಸಮರಸವಾದ ಬಳಿಕ ಎರಡೆಂಬುದಿಲ್ಲ ನೋಡಾ ಚೆನ್ನಬಸವಣ್ಣ.