ವಚನ - 1543     
 
ಸತ್ತು ಮುಂದೆ ದೇವರ ಕೂಡಿಹೆವೆಂಬಿರಿ, ಸಾಯದ ಮುನ್ನ ಸತ್ತಿಪ್ಪಿರಿ. ಎಂತಯ್ಯಾ ನಿಮ್ಮ ಲಿಂಗೈಕ್ಯದ ಪರಿ? ಎಂತಯ್ಯಾ ನಿಮ್ಮ ಪ್ರಮಥರ ಪರಿ? ಅಂಗದ ಅವಸ್ಥೆಯಲ್ಲದೆ ಲಿಂಗದ ಅವಸ್ಥೆ ಆರಿಗೂ ಇಲ್ಲ ಗುಹೇಶ್ವರಾ.