Index   ವಚನ - 1547    Search  
 
ಸದ್ಯೋಜಾತ ಬದ್ಧಜ್ಞಾನಿ, ವಾಮದೇವ ಆತುರಜ್ಞಾನಿ, ಅಘೋರ ಕೋಪಜ್ಞಾನಿ, ತತ್ಪುರುಷ ಕ್ಷಣಿಕಜ್ಞಾನಿ, ಈಶಾನ್ಯ ಅತೀತಜ್ಞಾನಿ-[ಈ] ಪರಿಯಲ್ಲ ನೋಡಾ. ಗುಹೇಶ್ವರಲಿಂಗದಲ್ಲಿ ಅವಿರಳಜ್ಞಾನಿ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನು.