ವಚನ - 1551     
 
ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಜ್ಞಾನ ಸುಜ್ಞಾನ ಶರಣಸ್ಥಲ. ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಆಗಮ್ಯದ ಐಕ್ಯಸ್ಥಲ- ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ಹೆಸರಿಲ್ಲ ಕುರುಹಿಲ್ಲ ತನಗೆ ತಾನಿಲ್ಲ ಗುಹೇಶ್ವರಾ.