ವಚನ - 1556     
 
ಸಾಗರದೊಳಗಿಪ್ಪ ಪ್ರಾಣಿಗಳು, ಬೇರೆ ಮತ್ತೊಂದೆಡೆಯಲ್ಲಿ ಇರಬಲ್ಲವೆ? ಭವಸಾಗರದೊಳಗಿಪ್ಪ ಜೀವಿಗಳಿಗೆ ಅದೇ ಗತಿಯಲ್ಲದೆ ಬೇರೆ ಮತ್ತೊಂದೆಡೆಯುಂಟೆ? ಗುಹೇಶ್ವರನ ಲೀಲೆ ಜಗನ್ಮಯವಾದಡೆ ನಾನು ಬೆರಗಾದೆನು.