ವಚನ - 1562     
 
ಸಿರಿಯಾಳ-ಚಂಗಳೆಯರಂತೆ ಶಿಶುವಧೆಯ ಮಾಡಿದವನಲ್ಲ, ನಂಬಿ-ಬಲ್ಲಾಳರಂತೆ ಕಾಮುಕತನವ ಮಾಡಿದವನಲ್ಲ, ಬೊಮ್ಮಯ್ಯ ಕಣ್ಣಪ್ಪನವರಂತೆ ಜೀವಹಿಂಸೆಯ ಮಾಡಿದವನಲ್ಲ. ಗುಹೇಶ್ವರಾ ನಿಮ್ಮ ಶರಣರಿಗಿಕ್ಕಿದ ತೊಡವು ಸಂಗನಬಸವಣ್ಣ.