ವಚನ - 1571     
 
ಸೃಷ್ಟಿ ಮೊದಲವಸಾನ ಕಡೆಯಾಗಿ ಅರಿವರಿವೆ ಜ್ಞಾನ, ಅಂತಪ್ಪ ಜ್ಞಾನವೆ ಚಿದ್ಬ್ರಹ್ಮ, ಆ ಚಿದ್ಬ್ರಹ್ಮ ಚಿದ್ಘನಲಿಂಗ ನೋಡಾ, ಅದೆಂತೆಂದಡೆ: ``ಸೃಷ್ಟ್ಯಾದ್ಯೈಕ್ಯಾಂತವಿಜ್ಞಾನೇ ಜ್ಞಾನಂಚಾತ್ಮಪ್ರಕಾಶಕಂ| ತತ್‌ಜ್ಞಾನಂ ಪರಮಂ ಬ್ರಹ್ಮಲಿಂಗಮಿತ್ಯೇವ ಭಾವಯೇತ್|| ಎಂದುದಾಗಿ, ನಿಮ್ಮನರಿದು ತನ್ನ ಮರೆದ ಪರಮ ಶಿವಯೋಗಿಗೆ ಪರಿಭವಂಗಳುಂಟೆ ಗುಹೇಶ್ವರಾ?