Index   ವಚನ - 1577    Search  
 
ಸ್ವಾನುಭಾವದ ಬೆಳಗಿನಲ್ಲಿ ಒಂದು ಬೆಕ್ಕು ಹುಟ್ಟಿತ್ತು. ಆ ಬೆಕ್ಕಿನ ತಲೆಯ ಮೇಲೊಂದು ಗಿರಿ ಹುಟ್ಟಿತ್ತು. ಗಿರಿಯ ಮೇಲೆರಡು ರತ್ನ ಹುಟ್ಟಿದವು. ಆ ರತ್ನಂಗಳನರಸಿಕೊಂಡು ಬರಲು, ಅವು ತನ್ನನವಗ್ರಹಿಸಿದವು. ಒಂದು ರತ್ನ ಅಂಗವನವಗ್ರಹಿಸಿತ್ತು, ಮತ್ತೊಂದು ರತ್ನ ಪ್ರಾಣವನವಗ್ರಹಿಸಿತ್ತು. ಆ ರತ್ನಂಗಳ ಪ್ರಭೆ ತಾನಾದ ನಮ್ಮ ಗುಹೇಶ್ವರನ ಶರಣ ಸಿದ್ಧರಾಮಯ್ಯ ದೇವರ ನಿಲವಿಂಗೆ ನಮೋ ನಮೋ ಎನುತಿರ್ದೆನಯ್ಯಾ ಚೆನ್ನಬಸವಣ್ಣಾ.