ವಚನ - 1584     
 
ಹರಹರಾ ನೀವಿಪ್ಪಠಾವನರಿಯದೆ, ಅಷ್ಟವಿಧಾರ್ಚನೆ ಶೋಡಶೋಪಚಾರ ಮಾಡುವರ ದಿಟ್ಟತನವ ನೋಡಾ! ಶಿವಶಿವಾ ನಿಮ್ಮ ಶ್ರೀಮುಖವನರಿಯದೆ ಸಕಲ ಪದಾರ್ಥವ ನಿಮಗರ್ಪಿಸಿ ಪ್ರಸಾದವ ಕೊಂಡೆವೆಂದೆಂಬವರ ಎದೆಗಲಿತನವ ನೋಡಾ! ಹಗರಣದ ಹಣ್ಣ ಮೆದ್ದು ಹಸಿವು ಹೋಯಿತ್ತೆಂದಡೆ ಆರು ಮೆಚ್ಚುವರು ಹೇಳಾ ಗುಹೇಶ್ವರಾ?