ವಚನ - 1594     
 
ಹಾಳುಮನೆಯ ಹೊಸತಿಲಲ್ಲಿ ನಿಂದಿದ್ದು, ಆರೂ ಬಾರದ ಬಟ್ಟೆಯ ನೋಡುತ್ತ, ಆರಿಂಗಾಗದಿರವು ನಮಗಾಯಿತ್ತೆನುತಲಿ, ಆರಯ್ಯ ಬಂದವರಿಗೆ ಶಂಕೆಯಿಲ್ಲ! ಕಾಲಿಲ್ಲದೆ ಬಂದವರು, ಕೈಯಿಲ್ಲದೆ ಕೊಂಬವರು, ಮೇಲು ತಲೆ ಇದ್ದವರು ನುಡಿವಾಗ ಮಾರಾರಿಯ ಬೆಳಸ, ಆರಯ್ಯ ಸಂತವಿಡುವರೆಂದಡೆ- ಸಾರಾಯಂಗಲ್ಲದೆ ಮತ್ತಿನ್ನಾರಿಗಹುದು ಹೇಳಾ? ಸಂತೆಯ ಗುಡಿಲ ಸೂಳೆಗೆ ಕೊಂತವ ಕೊಟ್ಟಡೆ ಎಂತು ಬಚ್ಚಿಡಬಹುದು? ಮರುಳುತನವು, ಶಂಕಿಸಿತು ಎನ್ನ ಮನವು, ಹಿಂದು ಮುಂದು ಕೂಡುವರಿಲ್ಲೆಂದು ಉಮ್ಮಳದಲ್ಲಿ. ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಪ್ರಸಾದವ ಕೊಂಡು ನಿರುಪಮಸುಖಿಯಾದೆನು.