ವಚನ - 1600     
 
ಹುಸಿಯಿಲ್ಲದ ಗೂಡಿನೊಳಗೆ, ಹೊಸ ಬಣ್ಣದ ಹಕ್ಕಿಯ ಭಸ್ಮವ ಮಾಡಿ ಆ ಗೂಡನೆಯ್ದೆ ನುಂಗೆ, ಶಿಶು ತಾಯ ಬೆಸಲಾಗಿ, ತಾಯಿ ಶಿಶುವ ನುಂಗೆ, ಶಿಶು ಕೋಪದಿಂದ ತಾಯನೆಯ್ದೆ ನುಂಗೆ, ಹೊಸ ದೇಶದಿಂದೊಬ್ಬನಾರಯ್ಯ ಬಂದಾತ ಹೆಸರಿಲ್ಲದಂತಿಬ್ಬರನೆಯ್ದೆ ನುಂಗೆ, ಬಸವ ಚನ್ನಬಸವ ಅನಿಮಿಷ ಗುಹೇಶ್ವರ ಸಹಿತ ಶಿಶುವಿನ ಕರಸ್ಥಲದಲ್ಲಿಯೆ ಸುಖಿಯಾದರು!