ವಚನ - 1604     
 
ಹೂವಿನ ಮೇಲೊಂದು ಚಿಕ್ಕ ಬೆಟ್ಟ ಹುಟ್ಟಿ, ಬೆಕ್ಕಿನ ಮೇಲಾರು ಬೆಟ್ಟ ಹುಟ್ಟಿದವು. ಬೆಟ್ಟದ ಮೇಲಣವರು ಕಲ್ಲನಿರಿಸಿ ಆರೂ ಕಾಣರು! ಒಂದು ಗಿರಿ ನೂರನಾಲ್ವತ್ತೆಂಟು ಲಕ್ಷ ಮುಖವು. ನಾನೊಂದು ಮುಖದಲಿ ಇದ್ದೇನೆ ಕಾಣಾ ಗುಹೇಶ್ವರಾ.