Index   ವಚನ - 1608    Search  
 
ಹೊಟ್ಟು ಜಾಲಿಯ ತುತ್ತತುದಿಯ ಮೇಲೊಂದು ಚೌಷಷ್ಟಿ ವಿದ್ಯಾಕಳಾಪ್ರವೀಣವೆಂಬ ಪಟ್ಟಣ. ಆ ಪಟ್ಟಣದೊಳಗೊಬ್ಬ ತಳವಾರ ಹುಟ್ಟು ಬಂಜೆಯ ಮಗ ಮರೆದೊರಗಲು, ಐದು ಆನೆಯ ಕಳ್ಳರೊಯ್ದರು, ಐದು ಒಂಟೆ ಹುಯ್ಯಲು ಹೋದವು ಅರೆಮರುಳಂಗೆ ನೆರೆಮರುಳ ಬುದ್ಧಿಯ ಹೇಳುತ್ತಿರ್ಪುದ ಕಂಡೆ. ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ ಹಾಲುಕ್ಕಿ ಮಿಕ್ಕ ಹಾಲ ಬೆಕ್ಕು ಕುಡಿಯಿತ್ತು, ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ.