Index   ವಚನ - 1610    Search  
 
ಹೊನ್ನೆಂಬ ಕಾರ್ಮಿಕವ ಜರಿದು ಹರಿದು, ಮಣ್ಣೆಂಬ ಭವದ ಭವವ ಹರಿದು, ಹೆಣ್ಣೆಂಬ ರಾಕ್ಷಸಿಯ ಅಣಲೊಳಗೆ ಸಿಕ್ಕಿ ಅಗಿದಗಿದು ತಿನಿಸಿಕೊಂಬ ಜಡಜೀವಿಗಳ ಸಂಗದಿಂದಾದ ಸಕಲ ಸುಖಭೋಗಂಗಳ ಬಿಟ್ಟು; ಲಿಂಗರತಿ ಪರಮಸುಖದ ಚಿದಮೃತದ ನಿತ್ಯ ತೃಪ್ತಿ ಸಂತೋಷ ಇಂಬುಗೊಂಡು, ವೇಷದ ಭ್ರಾಂತಿನ ಭ್ರಾಮಕದ ಸಮಯ ಕುಲಪಾಷಂಡಿಗಳ ತತ್ಸಂಗವ ಬಿಟ್ಟು, ನಿರಾಶಾ ಪಥದ ಸುಜ್ಞಾನವೆ ಅನುಕೂಲವಾಗಿ ಘೃತ ಫಳ ಮಧುರರಸ ಮೃಷ್ಟಾನ್ನಂಗಳಲ್ಲಿ ಮನಮಗ್ನವಾದ ಪರಮ ಪ್ರಸಾದದಲ್ಲಿ ಪರಿಣಾಮಿಯಾದ ಪರಮಲಿಂಗೈಕ್ಯ ವಿರಕ್ತಂಗೆ ಲಿಂಗಾರ್ಪಿತವಲ್ಲದೆ- ಇಂತೀ ಕ್ರಮವನರಿದು ಸಕಲಭ್ರಾಂತನಳಿಯದೆ ಮನ್ಮಥವೇಷಧಾರಿಗಳು ಪಂಚಲೋಹ ಕಾರ್ಮಿಕವ ಧರಿಸಿಕೊಂಡು, ಲಿಂಗಾರ್ಪಿತ ಭಿಕ್ಷೆಯೆಂದು ಭುಂಜಿಸುವ ಭುಂಜನೆಯೆಲ್ಲವು ವರಾಹ ಕುಕ್ಕುಟದ ಮೇಧ್ಯವು, ಅವರಿಗೆ ಪ್ರಸಾದವೆಂಬುದು ಸ್ವಪ್ನದಲ್ಲಿಯೂ .......ಕೊಂಬುದೆಲ್ಲವು ಕತ್ತೆಯ ಮಾಂಸ ಕಾಣಾ ಗುಹೇಶ್ವರಾ.