Index   ವಚನ - 182    Search  
 
ವ್ರತಗೇಡಿ ವ್ರತಗೇಡಿ ಎಂಬವ, ತಾನೆ ವ್ರತಗೇಡಿ. ವ್ರತ ಕೆಡಲಿಕೇನು ಹಾಲಂಬಿಲವೆ? ವ್ರತ ಕೆಟ್ಟ ಬಳಿಕ ಘಟ ಉಳಿಯಬಲ್ಲುದೆ? ಕಾಯದೊಳಗೆ ಜೀವವುಳ್ಳನ್ನಕ್ಕ ಅದೇ ಪ್ರಾಣಲಿಂಗವು ಕಾಣಾ ಗುಹೇಶ್ವರಾ.