ವಚನ - 23     
 
ದೇವರೆಲ್ಲರ ಹೊಡೆತಂದು ದೇವಿಯರೊಳಗೆ ಕೂಡಿತ್ತು ಮಾಯೆ, ಹರಹರಾ ಮಾಯೆ ಇದ್ದೆಡೆಯ ನೋಡಾ. ಶಿವಶಿವಾ ಮಾಯೆ ಇದ್ದೆಡೆಯ ನೋಡಾ. ಎರಡೆಂಬತ್ತುಕೋಟಿ ಪ್ರಮಥಗಣಂಗಳು, ಅಂಗಾಲ ಕಣ್ಣವರು, ಮೈಯೆಲ್ಲಾ ಕಣ್ಣವರು, ನಂದಿ ವಾಹನ ರುದ್ರರು-ಇವರೆಲ್ಲರು, ಮಾಯೆಯ ಕಾಲಗಾಹಿನ ಸರಮಾಲೆ ಕಾಣಾ ಗುಹೇಶ್ವರಾ.