ವಚನ - 262     
 
ಅಪ್ಪುವಿನ ಬಾವಿಗೆ ತುಪ್ಪದ ಘಟ; ಸಪ್ಪಗೆ, ಸಿಹಿ ಎಂಬ ಎರಡಿಲ್ಲದ ರುಚಿ, ಪರುಷ ಮುಟ್ಟದ ಹೊನ್ನು! ಕರೆಸದ ಬೊಜಗನು ಬೆರಸದೆ ಬಸುರಾಯಿತ್ತ ಕಂಡೆನಾಹಾ! ಅರುವಿನ ಆಪ್ಯಾಯನ ಮರಹಿನ ಸುಖವೊ! ಇದು ಕಾರಣ, ಮೂರು ಲೋಕವಳಿಯಿತ್ತು ಗುಹೇಶ್ವರಾ.