ವಚನ - 299     
 
ಬೆಕ್ಕ ನುಂಗಿದ ಕೋಳಿ ಸತ್ತು ಕೂಗಿತ್ತ ಕಂಡೆ. ಕರಿಯ ಕೋಗಿಲೆ ಬಂದು ರವಿಯ ನುಂಗಿತ್ತ ಕಂಡೆ. ಸೆಜ್ಜೆ ಬೆಂದು ಶಿವದಾರ ಉಳಿಯಿತ್ತು. ಪ್ರಾಣಲಿಂಗವೆಂಬ ಶಬ್ದ ವ್ರತಗೇಡಿಯಾಯಿತ್ತು. ನೀರ ಮೇಲಣ ಹೆಜ್ಜೆಯನಾರು ಬಲ್ಲವರಿಲ್ಲ. ಗುಹೇಶ್ವರನೆಂಬ ಶಬ್ದ ಅಲ್ಲಿಯೂ ಇಲ್ಲ, ಇಲ್ಲಿಯೂ ಇಲ್ಲ.