ವಚನ - 3     
 
ಜಲದೊಳಗಿರ್ದ ಕಿಚ್ಚು ಜಲವ ಸುಡದೆ, ಜಲವು ತಾನಾಗಿಯೆ ಇದ್ದಿತ್ತು ನೋಡಾ! ನೆಲೆಯನರಿದು ನೋಡಿಹೆನೆಂದಡೆ, ಅದು ಜಲವು ತಾನಲ್ಲ! ಕುಲದೊಳಗಿರ್ದು ಕುಲವ ಬೆರಸದೆ, ನೆಲೆಗೆಟ್ಟು ನಿಂದುದನಾರು ಬಲ್ಲರೊ? ಹೊರಗೊಳಗೆ ತಾನಾಗಿರ್ದು ಮತ್ತೆ ತಲೆದೋರದಿಪ್ಪುದು, ಗುಹೇಶ್ವರಾ ನಿಮ್ಮ ನಿಲವು ನೋಡಾ!