Index   ವಚನ - 325    Search  
 
ಕರಗಿಸಿ ನೋಡಿರೆ ಅಣ್ಣಾ ಕರಿಯ ಘಟ್ಟಿಯನು. ಆ ಕರಿಯ ಘಟ್ಟಿಯೊಳಗೊಂದು ರತ್ನವಿಪ್ಪುದು. ಆ ರತ್ನದ ಪರೀಕ್ಷೆಯ ಬಲ್ಲೆವೆಂಬವರೆಲ್ಲರ ಕಣ್ಣುಗೆಡಿಸಿತ್ತು ನೋಡಾ! ಅರುಹಿರಿಯರೆಲ್ಲರೂ ಮರುಳಾಗಿ ಹೋದರು. ಕರಿಯ ಘಟ್ಟಿಯ ಬಿಳಿದು ಮಾಡಿ ಮುಖದ ಮುದ್ರೆಯನೊಡೆಯಬಲ್ಲವರಿಗಲ್ಲದೆ ಗುಹೇಶ್ವರನ ನಿಲವನರಿಯಬಾರದು ನೋಡಿರಣ್ಣಾ.