ವಚನ - 349     
 
ತನ್ನ ತಾನರಿದೆನೆಂಬವನ ಮುನ್ನ ನುಂಗಿತ್ತು ಮಾಯೆ. ನಿನ್ನೊಳಗೆ ಅರಿವು ಭಿನ್ನವಾಗಿರುತ್ತಿರಲು ಮುನ್ನವೆ ನೀನು ದೂರಸ್ಥ ನೋಡಾ! ಭಿನ್ನವಿಲ್ಲದ ಅಜ್ಞಾನವ ಭಿನ್ನವ ಮಾಡಬಲ್ಲಡೆ ತನ್ನಲ್ಲಿ ಅರಿವು ನಿಜವಪ್ಪುದು ಗುಹೇಶ್ವರಾ.