ವಚನ - 383     
 
ಹುಟ್ಟಿದ ಕೂಸಿಂಗೆ ಪಟ್ಟವ ಕಟ್ಟಿ, ವಿಭೂತಿಯ ಹೂಸಿ, ಲಿಂಗವ ತೋರಿ-`ಜೋಜೋ' ಎಂದು ಜೋಗುಳವಾಡಿದಳು ಮಾಯಾದೇವಿಯಕ್ಕ! `ಜೋಜೋ' ಎಂಬ ಸರ ಹರಿದು ತೊಟ್ಟಿಲು ಬಿದ್ದಿತ್ತು, ಕೂಸು ಸತ್ತಿತ್ತು; ಗುಹೇಶ್ವರನುಳಿದನು!