ವಚನ - 400     
 
ತಲೆಯಿಲ್ಲದ ಅಟ್ಟೆ ಜಗವ ನುಂಗಿತ್ತು. ಅಟ್ಟೆಯಿಲ್ಲದ ತಲೆ ಆಕಾಶವ ನುಂಗಿತ್ತು. ಅಟ್ಟೆ ಬೇರೆ, ತಲೆ ಬೇರಾದಡೆ-ಮನ ಸಂಚಲಿಸುತ್ತಿದ್ದಿತ್ತು! ಅಟ್ಟೆಯನೂ ತಲೆಯನೂ ಬಯಲು ನುಂಗಿದಡೆ, ಅನು ನುಂಗಿದೆನು ಗುಹೇಶ್ವರನಿಲ್ಲದಂತೆ!