Index   ವಚನ - 434    Search  
 
ಜಗದಗಲದ ಮಂಟಪಕ್ಕೆ, ಮುಗಿಲಗಲದ ಮೇಲುಕಟ್ಟಿನಲ್ಲಿ ಚಿತ್ರ [ವಿಚಿತ್ರ] ವ ನೋಡುತ್ತ ನೋಡುತ್ತ, ಧ್ಯಾನವಿಶ್ರಾಮದಲ್ಲಿ ದಿಟದಿಟವೆಂಬುದೊಂದು ದರುಶನವ ನೋಡುತ್ತ ನೋಡುತ್ತ, ಗಗನಗಂಭೀರದಲ್ಲಿ ಉದಯವಾಯಿತ್ತ ಕಂಡೆ! ಗುಹೇಶ್ವರನೆಂಬ ಲಿಂಗವು ತಾನೆಯಾಗಿ.