Index   ವಚನ - 483    Search  
 
ಜಗದ್ವಂದ್ಯರೆಂದು ನುಡಿದು ನಡೆವರು ನೋಡಾ. ಭವಬಂಧನದ ಕುಣಿಕೆಯ ಕಳೆಯಲರಿಯರು ನೋಡಾ. ಭವ ತಮ್ಮ ತುಳಿ ತುಳಿದು ಕೊಂದಿತ್ತು ನೋಡಾ. ಶಬ್ದವೇದಿಗಳೆಂದು ನುಡಿದು ನಡೆವರು ನೋಡಾ, ನಿಃಶಬ್ದ ವೇದಿಸದಿರ್ದಡೆ, ಗುಹೇಶ್ವರ ನೋಡಿ ನಗುತ್ತಿಪ್ಪನೋಡಾ!